ಇತ್ತೀಚಿನ ಸುದ್ದಿಸಿನಿಮಾ

‘ಆಗಲೇ 28 ವರ್ಷಗಳು ಕಳೆದಿವೆ’; ಸಿನಿ ಜರ್ನಿ ನೆನೆದು ಭಾವುಕರಾದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ಅವರು ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 28 ವರ್ಷಗಳು ಕಳೆದಿವೆ. ತಂದೆ ಸಂಜೀವ್ ಅವರು ಹೋಟೆಲ್ ಉದ್ಯಮ ಹೊಂದಿದ್ದರು. ಗಾಂಧಿ ನಗರದಲ್ಲಿ ಈ ಹೋಟೆಲ್ ಇತ್ತು. ಹೀಗಾಗಿ, ಚಿತ್ರರಂಗದವರ ಒಡನಾಟ ಬೆಳೆಯಿತು. ಸುದೀಪ್​ಗೂ ಸಿನಿಮಾಗೆ ಕಾಲಿಡಬೇಕು ಎನ್ನುವ ಕನಸು ಹುಟ್ಟಿದ್ದು ಅಲ್ಲಿಯೇ. ಈಗ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಇದನ್ನು ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳು ನೆನಪಿಸಿಕೊಳ್ಳುತ್ತಿದ್ದಾರೆ. ಮೊದಲ ದಿನ ಕ್ಯಾಮೆರಾ ಎದುರಿಸಿದ್ದನ್ನು ಸುದೀಪ್ ನೆನಪಿಸಿಕೊಂಡಿದ್ದಾರೆ.

ಬ್ರಹ್ಮ’ ಸುದೀಪ್ ನಟನೆಯ ಮೊದಲ ಸಿನಿಮಾ. ಈ ಸಿನಿಮಾದಲ್ಲಿ ಅಂಬರೀಷ್ ಅವರು ನಟಿಸಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಲೇ ಇಲ್ಲ. ಸುದೀಪ್ ಈ ಚಿತ್ರಕ್ಕಾಗಿ ಕ್ಯಾಮೆರಾ ಎದುರುಸಿದ ದಿನವನ್ನು ಚಿತ್ರರಂಗದಲ್ಲಿ ಮೊದಲ ದಿನ ಎಂದು ಪರಿಗಣಿಸಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಇಂದಿಗೆ (ಜನವರಿ 31) 28 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ನಾನು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್​ ಅವರೊಂದಿಗೆ ಬ್ರಹ್ಮ ಚಿತ್ರದ ಶೂಟಿಂಗ್ ಆರಂಭಿಸಿದೆ. ಕೆಲವೇ ವರ್ಷಗಳ ಹಿಂದೆ ಇದು ನಡೆದಿದೆ ಎಂಬ ಭಾವನೆ. ಆದರೆ, ಈಗಾಗಲೇ ಇದಕ್ಕೆ 28 ವರ್ಷಗಳು ತುಂಬಿವೆ. ಎಲ್ಲರಿಗೂ ಧನ್ಯವಾದ’ ಎಂದು ಸುದೀಪ್ ಬರೆದುಕೊಂಡಿದ್ದಾರೆ.

‘ಮನರಂಜನಾ ಕ್ಷೇತ್ರದಲ್ಲಿ 28 ವರ್ಷಗಳು ನನ್ನ ಜೀವನದ ಅತ್ಯಂತ ಸುಂದರ ಭಾಗವಾಗಿದೆ. ಈ ಸಾಟಿಯಿಲ್ಲದ ಉಡುಗೊರೆಗಾಗಿ ನಾನು ದೇವರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಪೋಷಕರು, ಕುಟುಂಬ, ತಂತ್ರಜ್ಞರು, ನಿರ್ಮಾಪಕರು, ಬರಹಗಾರರು, ನನ್ನ ಸಹ-ನಟರು, ಮಾಧ್ಯಮ, ಮನರಂಜನಾ ಚಾನೆಲ್‌ಗಳು, ವಿತರಕರು, ಪ್ರದರ್ಶಕರು ಹಾಗೂ ನನ್ನ ಪ್ರಯಾಣದ ಭಾಗವಾಗಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದಿದ್ದಾರೆ ಸುದೀಪ್.

Related Articles

Leave a Reply

Your email address will not be published. Required fields are marked *

Back to top button