ಕುಸಿದ ಬೆಂಗಳೂರಿನ ಅಂತರ್ಜಲ: ಬೇಸಿಗೆ ಆರಂಭಕ್ಕೂ ಮೊದಲೆ ಮಹಾನಗರಕ್ಕೆ ಏನಿದು ಜಲಕ್ಷಾಮ?
ಬೆಂಗಳೂರು, ಫೆಬ್ರವರಿ 03: ಬೇಸಿಗೆ ಆರಂಭಕ್ಕೂ ಮುನ್ನ ರಾಜಧಾನಿ ಬೆಂಗಳೂರಿಗೆ ಜಲಕ್ಷಾಮ ಎದುರಾಗಿದೆ. ಒಂದೆಡೆಗೆ ಜಲಮಂಡಳಿಯಿಂದ ಸರಿಯಾಗಿ ನೀರು ಪೂರೈಕೆಯಾಗದಿದ್ದರೆ, ಇನ್ನೊಂದೆಡೆಗೆ ಅಂತರ್ಜಲಮಟ್ಟ ಕುಸಿತದಿಂದ ಬೋರ್‌ವೆಲ್‌ಗಳು ಬತ್ತಿಹೋಗುತ್ತಿವೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕುಸಿದಿರುವ ಅಂತರ್ಜಲ ಮಟ್ಟದಿಂದ ಬತ್ತಿರುವ ಬೋರ್‌ವೆಲ್‌ಗಳು, ಮತ್ತೊಂದೆಡೆಗೆ ಕಾವೇರಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಜಲಮಂಡಳಿಯಿಂದ ನೀರು ಪೂರೈಕೆಯಾಗುತ್ತಿಲ್ಲ. ನೀರಿಗಾಗಿ ಬೇಡಿಕೆ ಹೆಚ್ಚಾಗಿದೆ. ಈಗಲೇ ಈ ಪರಿಸ್ಥಿತಿ, ಇನ್ನೂ ಬೇಸಿಗೆ ಆರಂಭವಾದರೇ ಹೇಗೆ?. ಹೀಗಾಗಿ, ಸರಿಯಾಗಿ ನೀರು ಪೂರೈಕೆ ಮಾಡದ ಜಲಮಂಡಳಿ ವಿರುದ್ಧ ಬೆಂಗಳೂರು ನಿವಾಸಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಮಹದೇವಪುರ, ಕೆಆರ್ ಪುರ, ಯಶವಂತಪುರ, ಯಲಹಂಕ, ದಾಸರಹಳ್ಳಿ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ ವಿಧಾನಸಭಾ ವ್ಯಾಪ್ತಿಯ 110 ಹಳ್ಳಿಗಳು 2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗಿ ಸರಿ ಸುಮಾರು 16 ವರ್ಷಗಳೇ ಕಳೆದಿವೆ. ಇಲ್ಲಿ ವಾಸಿಸುವ ನಿವಾಸಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದ ನೀರು ಪೂರೈಕೆ ಮಾಡಬೇಕು. ಆದರೆ, ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ದಾಸರಹಳ್ಳಿ ವಿಧಾಸಭಾ ವ್ಯಾಪ್ತಿಯ ಮಲ್ಲಸಂದ್ರ ವಾರ್ಡ್‌ನಲ್ಲಿ ಕಳೆದ ಎರಡು ವರ್ಷಗಳಿಂದ ಒಂದು ವಾರ-ಹದಿನೈದು ದಿನಕ್ಕೆ ಕಾವೇರಿ ನೀರು ಬರುತ್ತಿದೆ. ಸಮಯಕ್ಕೆ ಸರಿಯಾಗಿ ಬಿಲ್ ಮಾತ್ರ ತಗೆದುಕೊಳ್ಳುತ್ತಾರೆ ನೀರು ಮಾತ್ರ ಸರಿಯಾಗಿ ಬರುವುದಿಲ್ಲವೆಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಇತ್ತ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇಟ್ಟಮಡುವಿನ ಕುವೆಂಪುನಗರದಲ್ಲೂ ಕೂಡ ಇದೇ ಪರಿಸ್ಥಿತಿ. ಇಲ್ಲಿ ಒಂದೇ ಕಟ್ಟಡದಲ್ಲಿ ನಾಲ್ಕೈದು ಕುಟುಂಬಗಳು ವಾಸವಾಗಿವೆ. ಆದರೆ, ಕಳೆದ 6 ತಿಂಗಳುಗಳಿಂದ ಕಾವೇರಿ ನೀರು ಸರಬರಾಜು ನಿಂತು ಹೋಗಿದೆ. ಹೀಗಾಗಿ, ಪ್ರತಿನಿತ್ಯ ಇಲ್ಲಿನ ಜನರು ನೀರಿಗಾಗಿ ಪರಿತಪಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ದಿನ ಕೂಡ ಕುಡಿಯಲು ಹಾಗೂ ಸ್ನಾನ ಮಾಡಲು ನೀರಿಲ್ಲದೇ ಜನರು ಪರದಾಟ ನಡೆಸಿದ್ದು, ಬೀದಿಯಲ್ಲಿ ಖಾಲಿ ಕೊಡ ಹಿಡಿದು ಅಧಿಕಾರಿಗಳ ವಿರುದ್ಧ ಆಕ್ರೋಶ ಹಾಕಿದ್ದಾರೆ. ಅಲ್ಲದೆ ಜಲಮಂಡಳಿ ಸರಿಯಾಗಿ ನೀರು ಬಿಡದೆ ಬಿಲ್ ಮಾತ್ರ ಕಟ್ಟಿಸಿಕೊಳ್ಳುತ್ತೆ. ಜಲಮಂಡಳಿಗೂ ಬಿಲ್ ಕಟ್ಟಬೇಕು ಅತ್ತ ಟ್ಯಾಂಕರ್ ನೀರಿಗೂ ದುಡ್ಡು ಕೊಡಬೇಕು, ನೀರು ಬಾರದ ಹಿನ್ನೆಲೆ ಟ್ಯಾಂಕರ್ ಮೋರೆ ಹೋಗುತ್ತಿದ್ದಾರೆ.
ಒಂದು ಟ್ಯಾಂಕರ್‌ಗೆ ಈ ಹಿಂದೆ 400 ರಿಂದ 500 ರೂಪಾಯಿ ಇತ್ತು. ಇದೀಗ ನೀರಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ 800ರಿಂದ 1 ಸಾವಿರ ರೂಪಾಯಿವರೆಗೆ ದುಡ್ಡು ತಗೆದುಕೊಳ್ಳುತ್ತಿದ್ದಾರೆ. ಇವತ್ತು ಹೇಳಿದರೆ ನಾಳೆ ತಂದು ಸಂಪಗಳಿಗೆ ನೀರು ಬಿಡುತ್ತಾರೆ. ಈಗಲೇ ಟ್ಯಾಂಕರ್‌ಗಳಿಗೆ ಇಷ್ಟೊಂದು ತೆಗೆದುಕೊಳ್ಳುತ್ತಿದ್ದಾರೆ. ಇನ್ನೂ ಬೇಸಿಗೆಯಲ್ಲಿ ಒಂದು ಟ್ಯಾಂಕರ್ ನೀರಿಗೆ ಇನ್ನಷ್ಟು ಬೆಲೆ ಏರಿಕೆ ಆತಂಕದಲ್ಲೇ ಇಲ್ಲಿನ ನಿವಾಸಿಗಳಿದ್ದು, ಸರ್ಕಾರ ಕೊಡುವ ಗ್ಯಾರಂಟಿ ಬೇಡ ನೀರು ಬೇಕು ಅಂತಿದಾರೆ ಮಹಿಳೆಯರು.
ಮಹದೇವಪುರ ವಲಯ ವ್ಯಾಪ್ತಿಯ ನಲ್ಲೂರು ಹಳ್ಳಿ ನಿವಾಸಿಗಳದ್ದು ಇದೇ ಗೋಳು. ಕಳೆದ 15 ವರ್ಷಗಳಿಂದ ಇಲ್ಲಿನ ನಿವಾಸಿಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ. ಇಲ್ಲಿ BWSSB ಯಿಂದ ನಲ್ಲಿಗಳನ್ನ ಅಳವಡಿಸಿದೆ. ಆದರೆ, ಒಂದು ಬಾರಿಯೂ ನೀರು ಬಂದಿಲ್ಲ. ಹೀಗಾಗಿ, ಕುಡಿಯುವ ನೀರಿನ ಘಟಕದಲ್ಲಿ ಶುದ್ಧೀಕರಣವಾಗಿ ಬರುವ ವೇಸ್ಟ್ ನೀರನ್ನು ಇಲ್ಲಿನ ನಿವಾಸಿಗಳು ದಿನಬಳಕೆಗೆ ಉಪಯೋಗ ಮಾಡುವ ಪರಿಸ್ಥಿತಿ ಇದೆ. ಅದಕ್ಕೂ ಕೂಡ ಸಾಲು ಸಾಲಾಗಿ ನೀರಿನ ಬಿಂದಿಗೆ ಇಟ್ಟು ನೀರು ಪಡೆಯಬೇಕು. ಈ ನೀರಿನಲ್ಲಿ ಸ್ನಾನ ಮಾಡಬೇಕು. ಕೆಲವೊಂದು ಬಾರಿ ಸ್ನಾನ ಮಾಡಿದರೆ ಚರ್ಮ ಅಲರ್ಜಿ ಉಂಟಾಗಿ ಮೈ ತುರಿಕೆ ಉಂಟಾಗುತ್ತೆ, ಬಾಯಿಯಲ್ಲಿ ನೀರು ಹಾಕಿದರೆ ಬಾಯಿ ಹುಣ್ಣಾಗುತ್ತೆ, ಹೇಳುವರು ಇಲ್ಲ ಕೇಳುವರು ಇಲ್ಲದಂತಾಗಿದೆ. ಅನಿವಾರ್ಯ ಈ ನೀರನ್ನು ಬಳಕೆ ಮಾಡಲೆ ಬೇಕು ಎನ್ನುತ್ತಾರೆ ಸ್ಥಳೀಯರು.