ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ 3 ದಿನ ವಿಶೇಷ ಶಿಬಿರ, ನಿಮ್ಮ ಗ್ರಾ.ಪಂಚಾಯತಿಗೆ ಭೇಟಿ ನೀಡಿ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಂದ ಕೆಲ ದೂರುಗಳು ಕೇಳಿಬರುತ್ತಿವೆ. ಬ್ಯಾಂಕ್, ಆಧಾರ್ ಕಾರ್ಡ್ ಲಿಂಕ್ ಸೇರಿದಂತೆ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಈ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸಲು ಮೂರು ದಿನ ವಿಶೇಶ ಕ್ಯಾಂಪ್ ಆಯೋಜಿಸಿದೆ.
ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ನಿಮ್ಮ ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅದರಂತೆ, ದಿನಾಂಕ:27.12.2023 ರಿಂದ 29.12.2023 ರವರೆಗೆ ಕ್ಯಾಂಪ್ ಆಯೋಜಿಸಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ಈ ಶಿಬಿರದಲ್ಲಿ ಸುಮಾರು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬ್ಯಾಂಕ್ ಖಾತೆ ಸಮಸ್ಯೆ, ಹಣ ಜಮೆಗೆ ಸಂಬಂಧಿಸಿದಂತೆ ಈ ಯೋಜನೆಗಯ ಲಾಭ ಪಡೆದುಕೊಳ್ಳಲು ಫಲಾನುಭವಿಗಳಿಗೆ ಕೆಲ ತೊಂದರೆಗಳು ಆಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಈ ಕ್ಯಾಂಪ್ನಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹರಿಸಲಾಗುತ್ತದೆ.
- ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
- ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು
- ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
- ಇ-ಕೆವೈಸಿ ಅಪ್‌ಡೇಟ್ ಮಾಡುವುದು.
- ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
- ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.