ಇತ್ತೀಚಿನ ಸುದ್ದಿರಾಜ್ಯ

ದುಗ್ಗಹಟ್ಟಿ, ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ

ಯಳಂದೂರು ತಾಲ್ಲೂಕಿನ ದುಗ್ಗಹಟ್ಟಿ ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಮಾಂಬಳ್ಳಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ್ ಮಾತಾನಾಡಿ

ನಮ್ಮ ಸಂವಿಧಾನ ನಮಗೆ ನೀಡಿರುವ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತುಕೊಂಡು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದರು.

  ಸ್ವಾತಂತ್ರ್ಯ ಭಾರತದ ನಂತರದ ದಿನಗಳಲ್ಲಿ ದೇಶದಲ್ಲಿ ಅನೇಕ ಸವಾಲುಗಳು ಎದುರಾದ ಸಂದರ್ಭದಲ್ಲಿ ದೇಶದ ಆಡಳಿತ ನಿರ್ವಹಣೆಗಾಗಿ ಕಾನೂನಿನ ಅವಶ್ಯಕತೆ ಕಂಡುಬರುತ್ತದೆ. ದೇಶವನ್ನು ಏಕತೆಯಿಂದ ನಡೆಸಲು ಒಂದು ಕಾನೂನು ಸುವ್ಯವಸ್ಥೆಯನ್ನು ರೂಪಿಸುವ ಸಂವಿಧಾನ ಅವಶ್ಯಕತೆ ಇರುವುದನ್ನು ಮನಗಂಡು ಡಾ. ಬಾಬು ರಾಜೇಂದ್ರ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನ ಸಭೆ ನಡೆಸಿ ಸಂವಿಧಾನ ಕರುಡು ರಚಿಸಲು ಸಮಿತಿಯನ್ನು ರಚಿಸಿ ಆ ಸಮಿತಿಗೆ ಡಾ. ಬಿ.ಆರ್ ಅಂಬೇಡ್ಕರ್‍ರವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಎಂದು ತಿಳಿಸಿದರು.

  ಡಾ. ಬಿ.ಆರ್ ಅಂಬೇಡ್ಕರ್ ರವರು ಅನೇಕ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಒಳಗೊಂಡ ಒಂದು ಬೃಹತ್ ಲಿಖಿತ ಸಂವಿಧಾನವನ್ನು ರಚಿಸಿ 1949  ನವೆಂಬರ್ 26 ರಂದು ಅಂಗೀಕರಿಸಲಾಯಿತು. ಈ ಸಂವಿಧಾನವನ್ನು 1950 ಜನವರಿ 26 ರಂದು ಜಾರಿಗೊಳಿಸಲಾಯಿತು ಎಂದು   ತಿಳಿಸಿದರು. 

  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ ರವರು ಮಾತನಾಡಿ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನ ಸ್ವಾತಂತ್ರ್ಯ, ಸಮಾನತೆಯನ್ನು ನೀಡಿ ಸರ್ವರ ಏಳಿಗೆಗೂ ನೆರವಾಗಿದೆ. ಇಂದಿನ ಮಕ್ಕಳು ಸಂವಿಧಾನದ ಬಗ್ಗೆ ಹೆಚ್ಚು ತಿಳಿದುಕೊಂಡು ಜಾಗೃತರಾಗಬೇಕು ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಕೇಂದ್ರಕ್ಕೆ ಪುಸ್ತಕ ಜೋಳಿಗೆಯ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳನ್ನು ನೀಡಲಾಯಿತು. ದೇಶಭಕ್ತಿ ಗೀತೆ, ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಸಂವಿಧಾನ ಪೀಠಿಕೆ ಬೋಧಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಾಯಿತ್ರಿ, ಉಪಾಧ್ಯಕ್ಷರಾದ ಸಾವಿತ್ರಿ ಜಿ.ಎನ್, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಣ್ಣ, ಗ್ರಾಮದ ಯಜಮಾನರು, ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button