ಇತ್ತೀಚಿನ ಸುದ್ದಿರಾಜ್ಯ
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿದ್ದ ಕೆ.ಎಲ್. ಅರುಣ್ ಕುಮಾರ್ (38) ಅವರು ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.
ನಿಧನವಾರ್ತೆ
ಕೆ.ಎಲ್. ಅರುಣ್ ಕುಮಾರ್
ಮದ್ದೂರು
ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ಅವರ ಆಪ್ತ ಸಹಾಯಕ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿದ್ದ ಕೆ.ಎಲ್. ಅರುಣ್ ಕುಮಾರ್ (38) ಅವರು ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.
ಮೃತರಿಗೆ ಓರ್ವ ಪುತ್ರ, ಪತ್ನಿ ಇದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಅವರಿಗೂ ಆಪ್ತ ಸಹಾಯಕರಾಗಿದ್ದರು.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕೊಪ್ಪದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.