ಇತ್ತೀಚಿನ ಸುದ್ದಿರಾಜ್ಯ
ಬಂಡೀಪುರ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್
ಗುಂಡ್ಲುಪೇಟೆ:
ತಾಲೂಕಿನ ಬಂಡೀಪುರಕ್ಕೆ ಆಗಮಿಸಿದ್ದ ಕೇಂದ್ರ ಪರಿಸರ ಹಾಗೂ ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಅರಣ್ಯಾಧಿಕಾರಿಗಳ ಜತೆಸಭೆ ನಡೆಸಿ ಮಾನವ ವನ್ಯಜೀವಿ ಸಂಘರ್ಷ ತಡೆ ಬಗ್ಗೆ ಚರ್ಚಿಸಿದರು.
ಬುಧವಾರ ದೆಹಲಿಯಿಂದ ಬೆಳಗ್ಗೆ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿ ರಸ್ತೆ ಮಾರ್ಗವಾಗಿ ಮಧ್ಯಾಹ್ನ ಬಂಡೀಪುರ ತಲುಪಿದರು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಬ್ರಿಜೇಶ್ ಕುಮಾರ್ ದೀಕ್ಷಿತ್ ಹಾಗೂ ದೆಹಲಿಯ ಹಿರಿಯ ಅಧಿಕಾರಿಗಳ ಜತೆ ಮಾನವ ವನ್ಯಜೀವಿ ಸಂಘರ್ಷ ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.