ಬೋರ್ ವೆಲ್ ಕೊರೆಯುವ ಯಂತ್ರಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕೆ ದುಡಿಯಲು ಸದಾ ಸಿದ್ಧನಾಗಿದ್ದೇನೆ. ಕುಡಿಯುವ ನೀರು ಸೇರಿದಂತೆ
ಯಾವುದೇ ಕುಂದು ಕೊರತೆಗಳಿದ್ದಲಿ ನೇರವಾಗಿ ನನ್ನನ್ನು ಭೇಟಿ ಮಾಡಿ ಅಹವಾಲು ನೀಡಬಹುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ 75ನೇ ಶಂಕರಮಠ ವಾರ್ಡಿನ ಸನ್ಮಾತ್ಮ ದೇವಸ್ಥಾನದ ಮುಂಭಾಗದಲ್ಲಿ ಬೋರ್ ವೆಲ್ ಕೊರೆಯುವ ಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂಬರುವ ಬೇಸಿಗೆಯಲ್ಲಿ ಕ್ಷೇತ್ರದಲ್ಲಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಇಂದು ಬೋರ್ ವೆಲ್ ಕೊರೆಯುವ ಯಂತ್ರಕ್ಕೆ ಚಾಲನೆ ನೀಡಿದ್ದೇನೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಅವೀನ್ ಆರಾಧ್ಯ, ಸುಬ್ಬಣ್ಣ ಸೇರಿದಂತೆ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.