ಇತ್ತೀಚಿನ ಸುದ್ದಿದೇಶ

ಭಾರತ

ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ. ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು, ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ, ಭೂತಾನ, ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ ಶ್ರೀಲಂಕಾ, ಮಾಲಡಿವ್ಸ್ನಂತಹ ದ್ವೀಪ ರಾಷ್ಟ್ರಗಳಿಗೆ ಹತ್ತಿರವಾಗಿದೆ. ಕೊಳ್ಳುವ ಶಕ್ತಿಯ ಮೇರೆಗೆ, ಪ್ರಪಂಚದ ನಾಲ್ಕನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ.

ಭಾರತ ದೇಶವು ಪ್ರಾಚೀನ ಸಿಂಧೂತಟದ ನಾಗರೀಕತೆಯ ತವರು ಮನೆಯಾಗಿದೆ. ಅನೇಕ ಐತಿಹಾಸಿಕ ವಾಣಿಜ್ಯ ಮಾರ್ಗಗಳು ಹಾಗೂ ಪ್ರಾಚೀನ ಸಾಮ್ರಾಜ್ಯಗಳು ಭಾರತ ದೇಶದಲ್ಲಿ ಉಗಮಿಸಿವೆ. ಪ್ರಪಂಚದ ನಾಲ್ಕು ಪ್ರಮುಖ ಧರ್ಮಗಳಾದ ಹಿಂದೂಧರ್ಮ, ಬೌದ್ಧ, ಜೈನ ಧರ್ಮ ಮತ್ತು ಸಿಖ್ ಧರ್ಮಗಳು ಭಾರತದಲ್ಲಿ ಆರಂಭವಾಗಿವೆ. ಝೋ ರಾಷ್ಟ್ರಿಯನಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ ಕ್ರಿ.ಶ ೭ನೇ ಸಹಸ್ರಮಾನದಲ್ಲಿ ಆಗಮಿಸಿ ಈ ಪ್ರದೇಶದ ಸಂಸ್ಕೃತಿಯನ್ನು ವೈವಿಧ್ಯಮಯವಾಗಿಸಿವೆ. ೧೬ನೇ ಶತಮಾನದಲ್ಲಿ ಭಾರತ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪೆನಿಯಿಂದ ಆಕ್ರಮಣಗೊಂಡು ಇಂಗ್ಲೇಂಡಿನ ಆಡಳಿತಕ್ಕೊಳಪಟ್ಟಿತು. ೧೯ನೇ ಶತಮಾನದ ಮಧ್ಯದಲ್ಲಿ ಭಾರತ ಅನೇಕ ಸ್ವಾತಂತ್ರ್ಯ ಹೋರಾಟದ ಫಲವಾಗಿ ಬ್ರಿಟೀಷರಿಂದ ಸ್ವತಂತ್ರವಾಯಿತು.

ಹೆಸರಿನ ಉಗಮ

ಭಾರತ ಎಂಬ ಹೆಸರು “ಭರತವರ್ಷ” ಎಂಬ ಹೆಸರಿನಿಂದ ಉಗಮಗೊಂಡದ್ದು. ಪುರಾತನ ಪೌರಾಣಿಕ ಆಕರಗಳಿಂದಲೂ ಈ ಹೆಸರು ಭಾರತಕ್ಕೆ ಸೂಚಿತವಾಗಿದೆ. ಋಷಭದೇವನ ಮಗ ಭರತ ಚಕ್ರವರ್ತಿಯಿಂದ ಅಥವಾ ಮಹಾರಾಜ ದುಶ್ಯಂತನ ಪುತ್ರನಾದ ಭರತ ಮಹಾರಾಜನ ಹೆಸರಿನಿಂದ ಬಂದದ್ದು. “ಇಂಡಿಯಾ” ಎಂಬ ಹೆಸರು ಸಿಂಧೂ ನದಿಯ ಇದರ ಪರ್ಷಿಯನ್ ರೂಪಾಂತರ “ಇಂಡಸ್” ಎಂಬುದರಿಂದ ಬಂದದ್ದು. ಭಾರತವನ್ನು ನಿರ್ದೇಶಿಸಲು ಉಪಯೋಗಿಸಲಾಗಿರುವ ಇತರ ಹೆಸರುಗಳಲ್ಲಿ ಒಂದು ಹಿಂದುಸ್ತಾನ ಕೂಡ ಒಂದು

ಚರಿತ್ರೆ

ಭಾರತದಲ್ಲಿ ಜನವಸತಿಯ ಮೊದಲ ಕುರುಹುಗಳೆಂದರೆ ಈಗಿನ ಮಧ್ಯ ಪ್ರದೇಶ ರಾಜ್ಯದ ಬಿಂಭೇಟ್ಕಾದಲ್ಲಿ ದೊರೆತಿರುವ ಶಿಲಾಯುಗದ ಪಳೆಯುಳಿಕೆಗಳು. ಸುಮಾರು ೯೦೦೦ ವರ್ಷಗಳ ಹಿಂದೆ ನಾಗರೀಕತೆಯ ಕುರುಹುಗಳು ಕಂಡು ಬಂದು ಕ್ರಿ.ಪೂ ೨೬೦೦ ರಿಂದ ಕ್ರಿ.ಪೂ. ೧೯೦೦ ರ ವರೆಗೆ ಸಿಂಧೂ ಕಣಿವೆ ನಾಗರೀಕತೆ ಅಸ್ತಿತ್ವದಲ್ಲಿತ್ತು. ನಂತರ ವೇದಗಳನ್ನು ಆಧರಿಸಿ ಹಿಂದೂ ಧರ್ಮ ಬೆಳೆಯಿತು. ಆ ಸಂದರ್ಭದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮಗಳು ಸಹ ಉಗಮಗೊಂಡವು. ಕ್ರಿ.ಪೂ ೫೦೦ ರ ನಂತರ ಅನೇಕ ಸ್ವತಂತ್ರ ರಾಜ್ಯಗಳು ತಲೆಯೆತ್ತಲಾರಂಭಿಸಿದವು. ಮೌರ್ಯ ಸಾಮ್ರಾಜ್ಯ ಭಾರತವನ್ನು ಸರಿ ಸುಮಾರಾಗಿ ಒಗ್ಗೂಡಿಸಿದ ಮೊದಲ ಸಾಮ್ರಾಜ್ಯ. ನಂತರ ಗುಪ್ತ ಸಾಮ್ರಾಜ್ಯ ಭಾರತದ “ಸುವರ್ಣ ಯುಗ”ದಲ್ಲಿ ಆಡಳಿತ ನಡೆಸಿತು. ಈ ಕಾಲದಲ್ಲಿ ಸಾಹಿತ್ಯ, ವಿಜ್ಞಾನ, ತತ್ವಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಭಾರತ ಸಾಧಿಸಿತು. ಎರಡನೆಯ ಸಹಸ್ರಮಾನದ ಆರಂಭದಲ್ಲಿ ಅನೇಕ ಮುಸ್ಲಿಮ್ ರಾಜರ ದಾಳಿ ಆರಂಭವಾಗಿ ೧೨ ನೆಯ ಶತಮಾನದಿಂದ ಮುಂದಕ್ಕೆ ಉತ್ತರ ಭಾರತದ ಅನೇಕ ಭಾಗಗಳು ಮತ್ತು ದಕ್ಷಿಣ ಭಾರತದ ಕೆಲ ಭಾಗಗಳು ಮುಸ್ಲಿಮ್ ಆಡಳಿತಕ್ಕೆ ಒಳಪಟ್ಟವು. (ಉದಾಹರಣೆಗೆ ದೆಹಲಿ ಸುಲ್ತಾನೇಟ್, ಬಹಮನಿ ಸುಲ್ತಾನರು, ಮೊಘಲ್ ಸಾಮ್ರಾಜ್ಯ). ೧೭ ನೆಯ ಶತಮಾನದಿಂದ ಮುಂದಕ್ಕೆ ಪೋರ್ಚುಗೀಸ್, ಫ್ರೆಂಚ್ ಮತ್ತು ಬ್ರಿಟಿಷ್ ವ್ಯಾಪಾರಿಗಳು ಭಾರತಕ್ಕೆ ಬರಲಾರಂಭಿಸಿದರು. ಹಂಚಿಹೋಗಿದ್ದ ಭಾರತದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಭಾರತದ ಅನೇಕ ಪ್ರದೇಶಗಳನ್ನು ಇವರು ವಶಪಡಿಸಿಕೊಳ್ಳಲಾರಂಭಿಸಿದರು. ಎಲ್ಲರಿಗಿಂತ ಪ್ರಬಲವಾಗಿ ಬೆಳೆದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಹೆಚ್ಚು ಕಡಿಮೆ ಸಂಪೂರ್ಣ ಭಾರತದ ಮೇಲೆ ಅಧಿಪತ್ಯ ಸ್ಥಾಪಿಸಿತು. ೧೮೫೭ ರಲ್ಲಿ ಭಾರತದ ಅನೇಕ ರಾಜ್ಯಗಳು ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡವು. ಇದರ ನಂತರ ನೇರ ಬ್ರಿಟಿಷ್ ಆಡಳಿತಕ್ಕೆ ಭಾರತ ಸಾಗಿತು. ಸ್ವಲ್ಪ ಕಾಲದಲ್ಲಿಯೇ ಭಾರತ ಸ್ವಾತಂತ್ರ್ಯ ಚಳುವಳಿ ಆರಂಭವಾಗಿ ಆಗಸ್ಟ್ ೧೫, ೧೯೪೭ ರಲ್ಲಿ ಭಾರತ ಸ್ವಾತಂತ್ರ್ಯ ಪಡೆಯಿತು. ಸ್ವಾತಂತ್ರ್ಯಾ ನಂತರ ನೆರೆಯ ದೇಶಗಳೊಂದಿಗೆ ಒಟ್ಟು ನಾಲ್ಕು ಯುದ್ಧಗಳು ನಡೆದಿವೆ. ೧೯೭೪ ರಲ್ಲಿ ಭಾರತ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಪಡೆಯಿತು. ೧೯೭೫ ರಿಂದ ೭೭(77) ರ ವರೆಗೆ ಇಂದಿರಾ ಗಾಂಧಿಯವರ ಸರ್ಕಾರದಲ್ಲಿ ತುರ್ತು ಪರಿಸ್ಥಿತಿ ಏರ್ಪಟ್ಟಿತ್ತು. ೯೦ ರ ದಶಕದಿಂದ ಆರ್ಥಿಕ ಉದಾರೀಕರಣ ನೀತಿಯನ್ನು ಭಾರತ ಪಾಲಿಸುತ್ತಾ ಬಂದಿದೆ.

Related Articles

Leave a Reply

Your email address will not be published. Required fields are marked *

Back to top button