ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ!

ಬೆಂಗಳೂರಿನ ಕಾಡುಗೋಡಿ ಬಳಿ 2 ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಮೃತಪಟ್ಟಿದೆ. ಘಟನೆಯಲ್ಲಿ ಜೆಸಿಬಿ ಚಾಲಕನ ಅಜಾಗರೂಕತೆ ಪ್ರಮುಖ ಕಾರಣ ಎನ್ನಲಾಗಿದೆ. ಚಾಲಕ ಪರಾರಿಯಾಗಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ರೋಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ವೈದೇಹಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಥನವ್ ರೆಡ್ಡಿ(2) ಮರಣೋತ್ತರ ಪರೀಕ್ಷೆ ಮಾಡಲಾಗಿದೆ.