
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025 : ಸೆಕೆಂಡ್ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, 1.30ರ ವೇಳೆಗೆ ವೆಬ್ಸೈಟ್ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿಯುಸಿ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿ ಮತ್ತು ಪ್ರಾಕ್ಟಿಕಲ್ ಸೇರಿದಂತೆ ಪ್ರತಿ ವಿಷಯದಲ್ಲೂ ಕನಿಷ್ಠ ಶೇ 35 ಅಂಕ ಗಳಿಸಬೇಕು. ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿಯಲ್ಲಿ ಕನಿಷ್ಠ 25 ಅಂಕಗಳು ಮತ್ತು ಪ್ರಾಕ್ಟಿಕಲ್‌ನಲ್ಲಿ 11 ಅಂಕಗಳನ್ನು ಗಳಿಸಬೇಕು.
ಪಿಯುಸಿ ಫಲಿತಾಂಶ 2025: ಆನ್ಲೈನ್ನಲ್ಲಿ ಪರಿಶೀಲಿಸುವುದು ಹೇಗೆ?
- ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
- ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
- ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
- Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
ಮಧ್ಯಾಹ್ನ 1.30 ರ ವೇಳೆಗೆ ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಂತರ ಶಿಕ್ಷಣ ಇಲಾಖೆ ವೆಬ್ಸೈಟ್ ಮೂಲಕ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸಲು karresults.nic.in ಹಾಗೂ kseab.karnataka.gov.in ಈ ಎರಡು ವೆಬ್ಸೈಟ್ಗಳನ್ನು ಬಳಸಬಹುದು.
ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ.ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಲಿದ್ದಾರೆ. ಆಮೇಲೆ 1.30 ರ ನಂತರ ಶಿಕ್ಷಣ ಇಲಾಖೆ ವೆಬ್ಸೈಟ್ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋನ್ ಮಾಡಿಕೊಳ್ಳಲೂ ಅವಕಾಶ ದೊರೆಯಲಿದೆ. karresults.nic.in ಹಾಗೂ kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ. ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.