
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.ಪರೀಕ್ಷೆ-1ರ ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವುದು ಹೇಗೆ? ವೈಬ್ಸೈಟ್ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್ಇಎಬಿ ಮೇ 9 ರಂದು ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
- karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ
SMS ಮೂಲಕ ಪರಿಶೀಲಿಸುವುದು ಹೇಗೆ?
- KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ.
- ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.