ಇತ್ತೀಚಿನ ಸುದ್ದಿರಾಜ್ಯ

ಸರಳವಾಗಿ ಕನಕದಾಸರ ಜಯಂತಿ ಆಚರಣೆ

ಯಾದಗಿರಿ: ತಾಲೂಕಿನ ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು.

ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ ಎಂದು ಮುಖ್ಯ ಗುರುಗಳಾದ ಚಂದ್ರಪ್ಪ ಗುಂಜನೋರ ಅವರು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ ಚನ್ನಬಸಪ್ಪ ಜೋಗಿ ಸತ್ಯಮ್ಮ ಅತಿಥಿ ಶಿಕ್ಷಕಕಿ‌.ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button