
ಚಾಮರಾಜನಗರ, ಏಪ್ರಿಲ್ 08 ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯು ಯಶಸ್ವಿಯಾಗಿ ಇಂದು ಮುಕ್ತಾಯವಾಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಡಾ. ಸಿ.ಎನ್. ರೇಣುಕಾದೇವಿ ಅವರು ಅತ್ಯಂತ ಸಂಘಟಿತವಾಗಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಿ ಯಶಸ್ಸು ಕಂಡಿದ್ದೇವೆ. ಇದಕ್ಕಾಗಿ ನೌಕರರ ಸಂಘ ಅವಿರತವಾಗಿ ಶ್ರಮಿಸಿದೆ. ಕ್ರೀಡಾಸಕ್ತ ನೌಕರರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಮುಂಬರುವ ವರ್ಷಗಳಲ್ಲಿ ಮತ್ತಷ್ಟು ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ಏರ್ಪಾಡು ಮಾಡಲಿದ್ದೇವೆ ಎಂದರು.
ನೌಕರರ ಹಿತ ಕಾಯಲು ಸಂಘ ಬದ್ದವಾಗಿದೆ. ಸರ್ಕಾರಿ ನೌಕರರ ಆರೋಗ್ಯ ಸಂಬಂಧಿಸಿದ ಸೌಲಭ್ಯಗಳು ಇನ್ನಿತರ ಅಗತ್ಯ ಅನುಕೂಲಗಳನ್ನು ಪಡೆದುಕೊಳ್ಳಬೇಕು. ಸರ್ಕಾರ ಒದಗಿಸುವ ಎಲ್ಲ ರೀತಿಯ ಪ್ರಯೋಜನವನ್ನು ಹೊಂದಬೇಕು ಎಂದು ಡಾ. ಸಿ.ಎನ್. ರೇಣುಕಾದೇವಿ ಅವರು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸುರೇಶ್ ಅವರು ಮಾತನಾಡಿ ಮಾನಸಿಕ ಒತ್ತಡ ಕಡಿಮೆ ಮಾಡಲು ಕ್ರೀಡೆ ಹಾಗೂ ಕಲೆ ಸಹಕಾರಿಯಾಗಿದೆ. ಎಲ್ಲಿಯೇ ಆಗಲಿ ಸಮಗ್ರ ಬೆಳವಣಿಗೆಯೊಂದಿಗೆ ಕಲೆಯ ಪಾತ್ರವು ಪ್ರಮುಖವಾಗಿರುತ್ತದೆ. ಸಾಧಕರು ನಮಗೆ ಮಾರ್ಗದರ್ಶಕರಾಗಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳುವುದರಿಂದ ಮನಸ್ಸು ಹಗುರವಾಗುತ್ತದೆ ಎಂದರು.
ವಾಣಿಜ್ಯ ತೆರಿಗೆ ಅಧಿಕಾರಿ ಚಂದ್ರಶೇಖರ್, ಪಶು ವೈದ್ಯಾಧಿಕಾರಿ ನಟರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಮಹದೇವಸ್ವಾಮಿ, ರಾಜ್ಯ ಪರಿಷತ್ ಸದಸ್ಯರಾದ ನಟರಾಜು, ಜಿಲ್ಲಾ ಖಜಾಂಚಿ ಶಿವಕುಮಾರಯ್ಯ, ಜಿಲ್ಲಾ ಕಾರ್ಯದರ್ಶಿ ಡಿ.ಎನ್. ಭರತ ಭೂಷಣ, ಕೊಳ್ಳೇಗಾಲ ತಾಲೂಕು ಅಧ್ಯಕ್ಷರಾದ ಜೋಸೆಫ್ ಅಲೆಗ್ಸಾಂಡರ್, ಹನೂರು ತಾಲೂಕು ಅಧ್ಯಕ್ಷರಾದ ಗುರುಸ್ವಾಮಿ, ಯಳಂದೂರು ತಾಲೂಕು ಅಧ್ಯಕ್ಷರಾದ ಮಹೇಶ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾದ ಪ್ರಸಾದ್ ಹೆಚ್.ಎಸ್. ಪದಾಧಿಕಾರಿಗಳಾದ ನಂಜುಂಡ, ಮಹೇಂದ್ರ, ರಾಜಶೇಖರ್, ರಾಜೇಶ್, ಸುಬ್ರಮಣ್ಯ, ವೇಲು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.