
ಚಾಮರಾಜನಗರ : ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಇಂದು ರೈತ ಸಂಘದ ನಗರದಲ್ಲಿ ಪ್ರತಿಭಟನೆ ನಡೆಯಿತು.ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಹತ್ತಿರ ಹಲವಾರು ಸಂಖ್ಯೆಯಲ್ಲಿ ಸೇರಿದ ರೈತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ ಜೋಡಿ ರಸ್ತೆಯ ಮಾರ್ಗವಾಗಿ ಜಿಲ್ಲಾಡಳಿತದ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.ಬಂಡೀಪುರ ರಾತ್ರಿ ಸಂಚಾರ ಅನುಮತಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕೇರಳ ಸರ್ಕಾರದ ಒತ್ತಡಕ್ಕೆ ಮಣಿದು ಹಾಗೂ ವೈನಾಡಿನ ಸಂಸದರಾದ ಪ್ರಿಯಾಂಕ ವಾದ್ರ ಮಾತಿಗೆ ರಾಜ್ಯ ಸರ್ಕಾರ ಸೊಪ್ಪು ಹಾಕಿ ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ ಅಕ್ರಮ ಚಟುವಟಿಕೆ ಹಾಗೂ ಕಾಡು ಪ್ರಾಣಿಗಳ ನಾಶಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ.ಆದ್ದರಿಂದ ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು.
ರಾಜ್ಯದಲ್ಲಿ ಪ್ರಸಕ್ತ ಸಾಲಿಗೆ ಪ್ರತಿ ಟನ್ ಕಬ್ಬಿಗೆ 5,000 ನಿಗದಿಗೆ ಕ್ರಮ ಕೈಗೊಳ್ಳಬೇಕು ಇಳುವರಿಯಲ್ಲಿನ ಮೋಸ ತಪ್ಪಿಸಲು ಸ್ಥಳೀಯ ತಜ್ಞರ ಜೊತೆ ರೈತ ಮುಖಂಡರ ತಾಂತ್ರಿಕ ಸಮಿತಿ ನೇಮಕ ಮಾಡಬೇಕು ಹಾಗೂ ತೂಕದಲ್ಲಿನ ಮೋಸ ತಡೆಯಲು ಕಾರ್ಖಾನೆ ಮುಂಭಾಗ ತೂಕದ ಯಂತ್ರಗಳನ್ನು ಅಳವಡಿಸಬೇಕು.
ರಾಜ್ಯದಲ್ಲಿ ಆನ್ಲೈನ್ ಗೆಮ್ ಗಳ ಹಾವಳಿ ಹೆಚ್ಚಾಗಿದ್ದು ರಾಜ್ಯ ಸರ್ಕಾರ ಯುವಕರ ರಕ್ಷಣೆಗೆ ಮುಂದಾಗಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಆನ್ಲೈನ್ ಗೇಮ್ ಎಂಬ ಕ್ಯಾನ್ಸರ್ ಗ್ರಾಮೀಣ ಭಾಗದಲ್ಲಿ ಯುವಕರ ಮರಣ ಹೋಮ ನಡೆಸುತ್ತದೆ ಆದ್ದರಿಂದ ಕ್ರಿಕೆಟ್ ಬೆಡ್ಡಿಂಗ್ ದಂದೆಯನ್ನು ಸಹ ತಕ್ಷಣ ನಿಲ್ಲಿಸಬೇಕು.
ಮಲೆಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಚಿನ್ನದ ಅವ್ಯವಹಾರದಲ್ಲಿ ಮೋಸ ಹೋಗಿದ್ದ ರೈತರಿಗೆ ಕೆಲವೊಂದಷ್ಟು ರೈತರಿಗೆ ಮಾತ್ರ ಚಿನ್ನವನ್ನು ಬಿಡಿಸಿಕೊಡಲು ಕ್ರಮ ಕೈಗೊಂಡಿದ್ದು ಉಳಿದ ರೈತರ ಚಿನ್ನವನ್ನು ಕಾನೂನು ತೊಡಕುಗಳನ್ನು ಸರಿಪಡಿಸಿ ತಕ್ಷಣ ಕೊಡಿಸಲು ಕ್ರಮ ಕೈಗೊಳ್ಳಬೇಕು.
ಕೃಷಿ ಪಂಪ್ಸೆಟ್ಟುಗಳಿಗೆ ಅಕ್ರಮ ಸಕ್ರಮ ಯೋಜನೆ ಮರು ಜಾರಿ ಆಗಬೇಕು. ಹಾಲಿನ ಪ್ರೋತ್ಸಾಹ ಧನ ಸುಮಾರು 800 ಕೋಟಿಯಷ್ಟು ಹಣವನ್ನು ರಾಜ್ಯ ಸರ್ಕಾರ ನೀಡಬೇಕು ಗ್ರಾಹಕರ ಮೇಲೆ ಹೊರೆ ಏರಿ, ರೈತರಿಗೆ ಹಾಲಿನ ದರ ರೂ. 4 ಹೆಚ್ಚಿಸಿದ್ದೇವೆ ಎಂದು ರಾಜ್ಯ ಸರ್ಕಾರ ನಡೆದುಕೊಳ್ಳುವುದು ನಿಲ್ಲಬೇಕು ತಕ್ಷಣ ಪ್ರೋತ್ಸಾಹ ಧನದ ಹಣವನ್ನು ಬಿಡುಗಡೆ ಮಾಡಲಿ.
ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ರೈತರ ಮನೆಬಾಗಿಲಿಗೆ ನೋಟಿಸ್ ಅನ್ನು ನೀಡಿ ನೀವು ಸಾಲ ತೀರಿಸುವಲ್ಲಿ ವಿಫಲರಾದರೆ ನಿಮ್ಮ ಪ್ರಕಾರವನ್ನು ನ್ಯಾಯಕ್ಕೆ ಹಾಕಲಾಗುವುದು ಎಂದು ರೈತರಿಗೆ ಕೊಡುತ್ತಿರುವುದು ನಿಲ್ಲಬೇಕು. ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ವಿಸ್ತುತ ವರದಿ ಡಿಪಿಆರ್ ರಚಿಸಬೇಕು ಹಾಗೂ ಅಂತರ್ಜಲ ವೃದ್ಧಿಗಾಗಿ ಉಳಿದಿರುವ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಗುದ್ದಲಿ ವೀರರಾಗಿದ್ದು ಉದ್ಘಾಟನಾ ಕಾರ್ಯಕ್ರಮದ ಅತಿಥಿಗಳಾಗಿದ್ದು ಗುದ್ದಲಿ ಪೂಜೆ ಉದ್ಘಾಟನೆ ಸೀಮಿತವಾಗದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವಂತಹ ಆಗಬೇಕು ಇದಕ್ಕೆ ಪೂರಕವಾಗುವಂತೆ ಸ್ಥಳೀಯ ಸಮಸ್ಯೆಗಳ ಬಗೆಹರಿಸಲು ಜಿಲ್ಲಾ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ನಡೆಸುತ್ತೇವೆ ಎಂದು ಹೇಳಿ ಸುಮಾರು ನಾಲ್ಕು ಭಾರೀ ಕಾರ್ಯಕ್ರಮವನ್ನು ರದ್ದು ಮಾಡಿ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಸುಳ್ಳು ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಮಂತ್ರಿಗಳು, ಎಂಎಲ್ಎಗಳು,ಎಂಪಿಗಳು ತಮಗೆ ಬೇಕಾದಂತೆ ಸಂಬಳ ಸಾರಿಗೆ ವಸತಿ ಬತ್ತೆ ಗಳನ್ನು ಪಕ್ಷಾತೀತವಾಗಿ ಏರಿಕೆ ಮಾಡಿಕೊಂಡರು ಆದರೆ ರೈತರ ವೈಜ್ಞಾನಿಕ ಬೆಲೆ ಮತ್ತು ಕೃಷಿ ಉತ್ಪನ್ನಗಳಿಗೆ ಮಿನಿಮಮ್ ಸಪೋರ್ಟ್ ಪ್ರೈಸ್ ಕಾನೂನು ಜಾರಿಗೆ ತರಲು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು ಈ ಮೇಲ್ಕಂಡ ವಿಚಾರಗಳ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಿ ರೈತರ ಸಮಸ್ಯೆ ಬಗ್ಗೆ ಹರಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ರೈತರ ಜೊತೆಗೂಡಿ ಹೋರಾಟದ ದಾರಿ ಹಿಡಿಯಬೇಕಾಗುತ್ತದೆ ಎಂದರು.
ಪ್ರತಿಭಟನಾ ಸಂದರ್ಭದಲ್ಲಿ
ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಮಂಚಳ್ಳಿ ಮಣಿಕಂಠ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ,ರಾಜ್ಯ ಸಂಚಾಲಕ ಹನುಮಯ್ಯ ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್ ,ಪ್ರಕಾಶ್ ಗಾಂಧಿ ಜಿಲ್ಲಾ ಉಪಾಧ್ಯಕ್ಷ ಮಲಿಯೂರು ಮಹೇಂದ್ರ, ರಾಮಣ್ಣ ಗುರುವಿನಪುರ,ಮೋಹನ್,ಚಂದ್ರ ಕೆರೆಹುಂಡಿ ಶಿವಣ್ಣ,ಸ್ಯಾಂಡ್ರಳ್ಳಿ ಬಸವರಾಜ್,, ಮಲ್ಲು ಅರಳಿ ಕಟ್ಟೆ ಪ್ರಭುಸ್ವಾಮಿ, ಮಹದೇವಪ್ಪ,ಬಸವಣ್,ನಂದೀಶ್ ಶ್ರೀಕಂಠ ಹರವೆ ಶಿವಪಾದಣ್ಣ ಹಾಜರಿದ್ದರು.