ಬೆಂಗಳೂರಿನಲ್ಲಿ ದ್ರಾವಿಡ್ ಕಾರು ಅಪಘಾತ.

ಬೆಂಗಳೂರು ಟ್ರಾಫಿಕ್‌ನಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಬಂದು ಗುದ್ದಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇಂದು (ಫೆಬ್ರವರಿ 04) ಈ ಘಟನೆ ನಡೆದಿದೆ. ಕಾರಿಗೆ ಗೂಡ್ಸ್ ಆಟೋ ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದರು. ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ ಮಧ್ಯೆ ಸಣ್ಣ ವಾಗ್ವಾದ ನಡೆದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಆದ್ರೆ, ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಟ್ರಾಫಿಕ್ ಜಾಮ್ ವೇಳೆ ನಿಂತಿದ್ದ ಕಾರಿಗೆ ಹಿಂದೆ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಘಟನೆ ನಂತರ ದ್ರಾವಿಡ್ ಕಾರಿನಿಂದ ಇಳಿದು ಬಂದು ಪರಿಶೀಲಿಸಿದರು. ಇನ್ನು ಟ್ರಾಫಿಕ್ ಇದ್ದ ಕಾರಣ ದ್ರಾವಿಡ್ ಕಾರು ಮುಂದಿನ ವಾಹನಕ್ಕೆ ಟಚ್ ಆಗಿದೆ ಎನ್ನಲಾಗಿದೆ. ಹೀಗಾಗಿ ದ್ರಾವಿಡ್ ತಮ್ಮ ಕಾರಿನ ಮುಂಭಾಗವನ್ನು ಪರಿಶೀಲಿಸುವುದನ್ನು ವಿಡಿಯೋನಲ್ಲಿ ಕಾಣಬಹುದು. ಇನ್ನು ಇದರಲ್ಲಿ ಆಟೋ ಚಾಲಕನದ್ದು ತಪ್ಪಾ ಅಥವಾ ದ್ರಾವಿಡ್ ಅವರದ್ದು ತಪ್ಪಾ ಎನ್ನುವುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಸದ್ಯ ರಾಹುಲ್ ದ್ರಾವಿಡ್, ಗೂಡ್ಸ್ ಆಟೋ ಚಾಲಕನ ನಂಬರ್ ಪಡೆದು ಅಲ್ಲಿಂದ ತೆರಳಿದ್ದಾರೆ.