ಕೆ.ಆರ್.ಪೇಟೆ: ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
೬೯ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗವಿರುವ ಬೃಹತ್ ಬೊಮ್ಮೇಗೌಡ ವೃತ್ತದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತೆಂಡೆಕೆರೆ ಬಾಳೆಹೊನ್ನೂರು ಶಾಖಾಮಠದ ಪೀಠಾಧ್ಯಕ್ಷರಾದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹಾಗೂ ಪರಂಪರೆ ಹೊಂದಿರುವ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಕನ್ನಡ ಭಾಷೆಗೆ ಸಲ್ಲುತ್ತದೆ. ಕನ್ನಡ ಭಾಷೆ, ನೆಲ ಜಲಕ್ಕೆ ಹಾಗೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಎದುರಾದ ಸಂದರ್ಭದಲ್ಲಿ ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸಲು ಸದಾ ಸಿದ್ದರಾಗಿರಬೇಕು ಎಂದು ಸ್ವಾಮೀಜಿ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಡಿ.ಎಸ್ ವೇಣು ಹಿಂದಿನಿಂದಲೂ ಕರ್ನಾಟಕ ರಕ್ಷಣಾ ವೇದಿಕೆಯು ನಾಡು ನುಡಿ, ನೆಲ ಜಲ ರಕ್ಷಣೆಗೆ ಹೋರಾಟ ನಡೆಸುತ್ತಿದೆ. ಕನ್ನಡ ನಿತ್ಯೋತ್ಸವವಾದರೇ ಮಾತ್ರ ಕನ್ನಡದ ಉಳಿವು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ಕರವೇ ಪದವೀದರ ಘಟಕದ ಗೌರವ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಸಾಸಲು ಗುರುಮೂರ್ತಿ,ಶಿವಪ್ರಸಾದ್,ಕರವೇ ತಾಲೂಕು ಘಟಕದ ಅಧ್ಯಕ್ಷ ಟೆಂಪೋ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಮದನ್, ಕರವೇ ಪದಾಧಿಕಾರಿಗಳಾದ ಸ್ವಾಮಿ,ಅನಿಲ್, ಪದ್ಮನಾಭ, ಅಶ್ವಥ್,ಗೋಪಿ,ಮನು,ಆನಂದ್,ಸುನಿಲ್ ಅಜಯ್, ಮಂಜು, ಹರೀಶ್, ಶ್ರೀಧರ್, ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.