6 ದಿನಗಳಿಂದ ಗ್ರಾಮ ಪಂಚಾಯಿತಿಗಳ ಸದಸ್ಯರ ಸತ್ಯಾಗ್ರಹವನ್ನು ಜಿಪಂ ಸಿಇಒ ಭರವಸೆ ತಾತ್ಕಾಲಿವಾಗಿ ಸೋಮವಾರ ಹಿಂಪಡೆಯಲಾಯಿತು.
ಜಲಜೀವನ್ ಮೀಷನ್ ಅನುಷ್ಠಾನದಲ್ಲಿ ವಿಳಂಬ ಮತ್ತು ಯೋಜನೆಯಲ್ಲಿ ನಡೆದಿರುವ ಕಳಪೆ ಕಾಮಗಾರಿ ತನಿಖೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗೆ ಒತ್ತಾಯಿಸಿ ಗ್ರಾ.ಪಂ ಸದಸ್ಯರುಗಳ ಒಕ್ಕೂಟ ವಿವಿಧ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ತಾಲೂಕಿನ 42 ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಧರಣಿ ಸತ್ಯಾಗ್ರಹ ಕೈಗೊಂಡಿದ್ದರು.
ಈ ಸಂಬಂದ ಜಿ.ಪಂ ಸಿಇಒ ಶೇಕ್ ತನ್ವಿರ್ ಆಸಿಫ್ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಮಾ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ಭವದನಲ್ಲಿ ಜಿ.ಪಂ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಬೇಡಿಕೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿ ಸಮಸ್ಯೆ ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ನಂತರ ಗ್ರಾ.ಪಂ ಸದಸ್ಯರುಗಳ ಒಕ್ಕೂಟದ ನಿರ್ದೇಶಕರು ಧರಣಿ ಸತ್ಯಾಗ್ರಹವನ್ನು ಒಕ್ಕೂಟದ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಪ್ರತಿಭಟನೆ ಕೈಬಿಡುವುದಾಗಿ ಒಕ್ಕೂಟದ ಅಧ್ಯಕ್ಷ ಜಿ.ಎನ್.ಸತ್ಯ ಸುದ್ದಿಗಾರರಿಗೆ ತಿಳಿಸಿದರು.
ಜಿ.ಪಂ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಬೇಕು ಹಾಗೂ ಸರ್ಕಾರದ ಮಟ್ಟದ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿ ತೆಗೆದುಕೊಂಡು ಬಗೆ ಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಒಂದು ವೇಳೆ ಸಭೆಯಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗೆ ಸ್ಪಂದನೆ ಸಿಗದಿದ್ದಲ್ಲಿ ಚಳವಳಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಜಿ.ಎನ್. ಸತ್ಯ ಎಚ್ಚರಿಕೆ ನೀಡಿದರು.
ಮದ್ದೂರು ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಇ.ಕೃಷ್ಣ, ತಾಲೂಕು ಗೌರವಾಧ್ಯಕ್ಷ ಎಸ್.ದಯಾನಂದ, ಉಪಾಧ್ಯಕ್ಷರಾದ ಡಿ.ನಳಿನಿ, ಸಿ.ಶಿವಲಿಂಗಯ್ಯ, ಬ್ಯಾಡರಹಳ್ಳಿ ರಾಮಕೃಷ್ಣ, ಎಂ.ಮಹೇಶ್, ಎಸ್.ಬಿ.ತಮ್ಮೇಗೌಡ, ಸಂಘಟನಾ ಕಾರ್ಯದರ್ಶಿಗಳಾದ ವಿಜಯ್ಎನ್.ಗೌಡ, ಎ.ಜಗದೀಶ್, ಮಾದೇಶ್, ಎಂ.ಚಂದ್ರಶೇಖರ, ಶ್ವೇತಾ, ಖಜಾಂಚಿ ಎಚ್.ಕೆ.ನಂದೀಶ್ ಗೌಡ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿ.ಬಿ.ಮಂಜುನಾಥ, ನಿರ್ದೇಶಕರಾದ ಎಚ್.ಎಲ್.ದಯಾನಂದ, ಮಹಾಲಕ್ಷ್ಮಿ, ಎಚ್.ಗೋವರ್ಧನ, ಎಸ್.ಕೃಷ್ಣ, ಕೃಷ್ಣ, ಕೆ.ಆರ್.ವೆಂಕಟೇಶ ಇದ್ದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 6 ದಿನಗಳಿಂದ ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ನಡೆಸುತ್ತಿರುವ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹವನ್ನು ಜಿಪಂ ಸಿಇಒ ಭರವಸೆ ಮೇರೆಗೆ ಧರಣಿಯನ್ನು ತಾತ್ಕಾಲಿವಾಗಿ ಸೋಮವಾರ ಹಿಂಪಡೆಯಲಾಯಿತು. ಜಿ.ಎನ್.ಸತ್ಯ, ಎಂ.ಇ.ಕೃಷ್ಣ, ಎಸ್.ದಯಾನಂದ, ಡಿ.ನಳಿನಿ, ಸಿ.ಶಿವಲಿಂಗಯ್ಯ ಇದ್ದರು.