ಆರೋಗ್ಯಇತ್ತೀಚಿನ ಸುದ್ದಿಕ್ರೈಂ

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ

ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ  ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇದಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೈಯ್ಯಪ್ಪಹಳ್ಳಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನರ್ಸ್ ಉಷಾರಾಣಿ ಬಂಧಿತ ಆರೋಪಿ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬಂಧಿತ ಉಷಾರಾಣಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ.ಚಂದನ್ ಬಲ್ಲಾಳ್​ನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್​ ಉಷಾರಾಣಿ ಕೆಲಸ ಬಿಟ್ಟಿದ್ದಳು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದಳು.

ನರ್ಸ್​ ಉಷಾರಾಣಿ ಪ್ರಕರಣದ ಮತ್ತೊಬ್ಬ ಆರೋಪಿ ಬ್ರೋಕರ್ ಪುಟ್ಟರಾಜು ಸಂಬಂಧಿ ಆಗಿದ್ದಾಳೆ. ಬ್ರೋಕರ್ ಪುಟ್ಟರಾಜು ಅಣತಿ ಮೇರೆಗೆ ಉಷಾರಾಣಿ ಗರ್ಭಪಾತ ಮಾಡುತ್ತಿದ್ದಳು. ಗರ್ಭಪಾತಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಳು. ಬೈಯ್ಯಪ್ಪಹಳ್ಳಿ ಪೊಲೀಸರು ಬ್ರೋಕರ್​ ಪುಟ್ಟರಾಜು ಅನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಎಲ್ಲ ವಿಚಾರಗಳು ಬಯಲಾಗಿವೆ. ಸದ್ಯ ಬ್ರೋಕರ್​​ ಪುಟ್ಟರಾಜು ಜಾಮೀನು ಪಡೆದಿದ್ದು, ಸಂಬಂಧಿ ಉಷಾರಾಣಿಯನ್ನು ಬಂಧಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button