ಇತ್ತೀಚಿನ ಸುದ್ದಿದೇಶ

ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ

ನವದೆಹಲಿ, : ನವದೆಹಲಿ ಪ್ರವಾಸದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರದ ಬಗ್ಗೆ ಮಾತುಕತೆ ನಡೆಸಿದ್ದು, ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಕೇಂದ್ರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button