ಇತ್ತೀಚಿನ ಸುದ್ದಿರಾಜ್ಯ

ಸುವರ್ಣಾವತಿ ಜಲಾಶಯದಿಂದ ನೀರು ಬಿಡುಗಡೆ:ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ

ಚಾಮರಾಜನಗರ: ಸುವರ್ಣಾವತಿ ಜಲಾಶಯವು ಯಾವುದೇ ಸಮಯದಲ್ಲಿ ಭರ್ತಿಯಾಗಬಹುದಾಗಿದ್ದು ಜಲಾಶಯದ ನದಿ ಪಾತ್ರದಲ್ಲಿ‌ ಬರುವ ರೈತಬಾಂಧವರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ ಮಾಡಲಾಗಿದೆ.

ಸುವರ್ಣಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಜಲಾಶಯದ ನೀರಿನ ಸಾಮರ್ಥ್ಯ ಗರಿಷ್ಠ ಮಟ್ಟ ತಲುಪುವ ಹಂತದಲ್ಲಿದ್ದು ಯಾವುದೇ ಸಮಯದಲ್ಲಿ ಭರ್ತಿಯಾಗಬಹುದಾಗಿದೆ.ಇಂದು ಸಂಜೆ 6 ಗಂಟೆ ಸಮಯದಲ್ಲಿ ಜಲಾಶಯದಿಂದ 150 ಕ್ಯೂಸೆಕ್ ನೀರು ಬಿಡಲಾಗಿದೆ.

ಈ ಹಿನ್ನಲೆಯಲ್ಲಿ ತಾಲೂಕಿನ ಹರದನಹಳ್ಳಿ ಹೋಬಳಿಯ ಅಟ್ಟಗೂಳಿಪುರದ ಹತ್ತಿರ ಬರುವ ಸುವರ್ಣಾವತಿ ಜಲಾಶಯ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಹಾಗೂ ನದಿ ಪಾತ್ರದಲ್ಲಿ ಬರುವ ರೈತರು ಮತ್ತು ಸುತ್ತಮುತ್ತಲ ಗ್ರಾಮಸ್ಥರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು .ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಕಬಿನಿ‌ ನಾಲೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button