ರಾಜ್ಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆ ಶಾಸಕರಿಗೆ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿರುವಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ವಿಚಾರ ಮುಂದಿಟ್ಟುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಔತಣ ಕೂಟ ಆಯೋಜಿಸಲು ಮುಂದಾಗಿದ್ದಾರೆ. ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಈಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakuamr) ಮಧ್ಯೆ ಕಳೆದ ಕೆಲವು ದಿನಗಳಿಂದಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬಜೆಟ್ ವೇಳೆಗೆ ಎಲ್ಲವೂ ತುಸು ತಣ್ಣಗಾಗಿದ್ದರೂ, ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸದನದಲ್ಲೇ ಸಿದ್ದರಾಮಯ್ಯ ಹೇಳಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಇದೇ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಔತಣಕೂಟ ಆಯೋಜನೆ ಮಾಡಲು ಮುಂದಾಗಿದ್ದಾರೆ. ಬೆಂಗಳೂರು ನಗರದ ಖಾಸಗಿ ಹೊಟೇಲ್​ನಲ್ಲಿ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆಯೂ ಡಿಕೆ ಶಿವಕುಮಾರ್ ಔತಣಕೂಟ ಸಾಹಸಕ್ಕೆ ಕೈಹಾಕಿದ್ದು ಭಾರಿ ಮಹತ್ವ ಪಡೆದಿದೆ.ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ್ದನ್ನೇ ನೆಪವಾಗಿಟ್ಟುಕೊಂಡು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಅವರು ಮಾರ್ಚ್ 11 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ್ದಾರೆ. ಇಷ್ಟೇ ಅಲ್ಲದೆ, ಪ್ರತಿ ಅಧಿವೇಶನ ಸಂದರ್ಭದಲ್ಲಿಯೂ ಡಿಕೆ ಶಿವಕುಮಾರ್ ಶಾಸಕರಿಗೆ ಡಿನ್ನರ್ ಆಯೋಜನೆ ಮಾಡುತ್ತಿದ್ದಾರೆ.ಮಾರ್ಚ್ 15 ರಂದು ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರುಗಳ, ಮುಂಚೂಣಿ ಘಟಕಗಳ ಅಧ್ಯಕ್ಷರಿಗೂ ಡಿನ್ನರ್ ಆಯೋಜನೆ ಸಾಧ್ಯತೆ ಇದೆ. ಈ ಮೂಲಕ ಶಾಸಕರ ವಿಶ್ವಾಸ ಹೆಚ್ಚಿಸಿಕೊಳ್ಳಲು ಡಿಕೆ ಶಿವಕಿಮಾರ್ ತಂತ್ರ ಹೂಡಿದ್ದಾರೆ ಎನ್ನಲಾಗಿದೆ. ಅದರ ಜತೆಗೆ, ಪಕ್ಷದ ಪದಾಧಿಕಾರಿಗಳ, ಜಿಲ್ಲಾಧ್ಯಕ್ಷರ, ಮುಂಚೂಣಿ ಘಟಕಗಳ ಅಧ್ಯಕ್ಷರ ವಿಶ್ವಾಸ ಗಳಿಸುವ ಚಿಂತನೆ ಅವರದ್ದಾಗಿದೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವ ಇಂಗಿತವನ್ನೂ ಹೊಂದಿದ್ದಾರೆ ಎನ್ನಲಾಗಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಅಧಿಕಾರ ಹಂಚಿಕೆ ಸೂತ್ರ ನೆನಪು ಮಾಡುತ್ತಿದ್ದಾರೆ.ಹೈಕಮಾಂಡ್ ನಾಯಕರ ಭೇಟಿ ಸಂದರ್ಭದಲ್ಲೂ, ಶ್ರಮಕ್ಕೆ ಫಲ ನೀಡುವ ಕೆಲಸ ಶುರು ಮಾಡಿ ಎಂದು ಡಿಕೆಶಿ ಮನವಿ ಮಾಡಿದ್ದರು ಎನ್ನಲಾಗಿದೆ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡೇ ಅವರು ಡಿನ್ನರ್ ಪಾರ್ಟಿ ಆಯೋಜಿಸಿರುವ ಸಾಧ್ಯತೆ ಇದೆ.



Related Articles

Leave a Reply

Your email address will not be published. Required fields are marked *

Back to top button